ADVERTISEMENT

ಆಂಧ್ರ, ತಮಿಳುನಾಡು ಚಾಂಪಿಯನ್‌

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2017, 19:30 IST
Last Updated 8 ಅಕ್ಟೋಬರ್ 2017, 19:30 IST
ಶಿಕಾರಿಪುರದಲ್ಲಿ ಭಾನುವಾರ ನಡೆದ 19 ವರ್ಷದೊಳಗಿನವರ ರಾಷ್ಟ್ರ ಮಟ್ಟದ ಕಿರಿಯರ ಬಾಲ್‌ ಬ್ಯಾಡ್ಮಿಂಟನ್‌ ಪುರುಷರ ವಿಭಾಗದಲ್ಲಿ ಆಂಧ್ರಪ್ರದೇಶದ ಕ್ರೀಡಾಪಟುಗಳು ಪ್ರಥಮ ಸ್ಥಾನ ಗಳಿಸಿದರು
ಶಿಕಾರಿಪುರದಲ್ಲಿ ಭಾನುವಾರ ನಡೆದ 19 ವರ್ಷದೊಳಗಿನವರ ರಾಷ್ಟ್ರ ಮಟ್ಟದ ಕಿರಿಯರ ಬಾಲ್‌ ಬ್ಯಾಡ್ಮಿಂಟನ್‌ ಪುರುಷರ ವಿಭಾಗದಲ್ಲಿ ಆಂಧ್ರಪ್ರದೇಶದ ಕ್ರೀಡಾಪಟುಗಳು ಪ್ರಥಮ ಸ್ಥಾನ ಗಳಿಸಿದರು   

ಶಿಕಾರಿಪುರ: ‘ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಏಕಲವ್ಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 19 ವರ್ಷದೊಳಗಿನವರ ರಾಷ್ಟ್ರಮಟ್ಟದ ಬಾಲ್‌ ಬ್ಯಾಡ್ಮಿಂಟನ್‌ ಟೂರ್ನಿಯ ಪುರುಷರ ವಿಭಾಗದಲ್ಲಿ ಆಂಧ್ರಪ್ರದೇಶ ಹಾಗೂ ಮಹಿಳೆಯರ ವಿಭಾಗದಲ್ಲಿ ತಮಿಳುನಾಡು ತಂಡಗಳು ಚಾಂಪಿಯನ್‌ ಆದವು.

ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ತಮಿಳುನಾಡು, ತೃತೀಯ ಕರ್ನಾಟಕ ಮತ್ತು ನಾಲ್ಕನೇ ಸ್ಥಾನ ಕೇರಳದ ಪಾಲಾಯಿತು. ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಕರ್ನಾಟಕ, ತೃತೀಯ ಸ್ಥಾನ ಆಂಧ್ರಪ್ರದೇಶ, ನಾಲ್ಕನೇ ಸ್ಥಾನ ಕೇರಳದ ಪಾಲಾಯಿತು.

ಪುರುಷರ ಡಬಲ್ಸ್‌ ವಿಭಾಗದಲ್ಲಿ ತಮಿಳುನಾಡು ಪ್ರಶಸ್ತಿ ಎತ್ತಿ ಹಿಡಿಯಿತು. ಆಂಧ್ರಪ್ರದೇಶ ದ್ವಿತೀಯ ಸ್ಥಾನ ಗಳಿಸಿತು. ಮಹಿಳೆಯರ ವಿಭಾಗದ ಪ್ರಶಸ್ತಿ ತಮಿಳುನಾಡು ಗಳಿಸಿದರೆ ಕರ್ನಾಟಕ ರನ್ನರ್ ಅಪ್‌ ಆಯಿತು. ಮಿಶ್ರ ಡಬಲ್ಸ್‌ನಲ್ಲಿ ತಮಿಳುನಾಡು ಮತ್ತು ಕರ್ನಾಟಕ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.