ADVERTISEMENT

ಆಟ್ಯಾಪಾಟ್ಯಾ: ಭಾರತ ತಂಡಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2013, 19:59 IST
Last Updated 9 ಜೂನ್ 2013, 19:59 IST

ಹುಬ್ಬಳ್ಳಿ: ಹುಬ್ಬಳ್ಳಿಯ ನೆಹರೂ ಕಾಲೇಜು ವಿದ್ಯಾರ್ಥಿ ಸಯ್ಯದ್ ಬೇಪಾರಿ ಹಾಗೂ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಚಂದರಗಿ ಜೂನಿಯರ್ ಕಾಲೇಜು ವಿದ್ಯಾರ್ಥಿ ಯಲ್ಲಪ್ಪ ಅವರು ಇದೇ 16ರಿಂದ 19ರವರೆಗೆ ಭೂತಾನ್ ದೇಶದ ಸಿಯಾಂಗ್‌ನಲ್ಲಿ ನಡೆಯಲಿರುವ ಪ್ರಥಮ ಆಟ್ಯಾಪಾಟ್ಯಾ ಏಷಿಯನ್ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಟೂರ್ನಿಯ ಕ್ರೀಡಾಧಿಕಾರಿಯಾಗಿ ಧಾರವಾಡದ ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್‌ನ ಡಾ. ವಿ.ಡಿ. ಪಾಟೀಲ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಆಟ್ಯಾಪಾಟ್ಯಾ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಹೊರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.