ADVERTISEMENT

ಆಸ್ಟ್ರೇಲಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್: ಸಿಂಧುಗೆ ಸೋಲು

ಪಿಟಿಐ
Published 23 ಜೂನ್ 2017, 10:48 IST
Last Updated 23 ಜೂನ್ 2017, 10:48 IST
ಆಸ್ಟ್ರೇಲಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್: ಸಿಂಧುಗೆ ಸೋಲು
ಆಸ್ಟ್ರೇಲಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್: ಸಿಂಧುಗೆ ಸೋಲು   

ಸಿಡ್ನಿ: ಭಾರತದ ಪಿ.ವಿ ಸಿಂಧು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೋಲು ಅನುಭವಿಸಿದ್ದು, ಟೂರ್ನಿಯಿಂದ ಹೊರ ಬಂದಿದ್ದಾರೆ.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದ ಆಟಗಾರ್ತಿ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ಚೀನಾ ತೈಪೆಯ ತೈ ಜು ಯಿಂಗ್ ವಿರುದ್ಧ 21–10, 20–22, 16–21ರಲ್ಲಿ ಪರಾಜಿತರಾದರು.

ಇಂದು ಕಂಡ ಸೋಲಿನೊಂದಿಗೆ ಸಿಂಧು ತೈ ಎದುರು ಏಳು ಪಂದ್ಯ ಸೋತಂತಾಗಿದೆ. ರಿಯೊ ಒಲಿಂಪಿಕ್ಸ್ ಸೇರಿ ಮೂರು ಬಾರಿ ಅವರನ್ನು ಮಣಿಸಿದ ದಾಖಲೆ ಹೊಂದಿದ್ದಾರೆ.

ADVERTISEMENT

ಗುರುವಾರ ನಡೆದಿದ್ದ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಸಿಂಧು 21–13, 21–18ರಲ್ಲಿ ನೇರ ಗೇಮ್‌ಗಳಿಂದ ಚೀನಾದ ಚೆನ್ ಕ್ಸಿಯೊಕ್ಸಿನ್ ಎದುರು ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.