ADVERTISEMENT

ಆಸ್ಟ್ರೇಲಿಯಾ ಯಶಸ್ಸಿನಲ್ಲಿ ಲೀ ಪಾತ್ರ ದೊಡ್ಡದು

​ಪ್ರಜಾವಾಣಿ ವಾರ್ತೆ
Published 25 ಜನವರಿ 2011, 19:30 IST
Last Updated 25 ಜನವರಿ 2011, 19:30 IST

ಮೆಲ್ಬರ್ನ್ (ಪಿಟಿಐ): ಆಸ್ಟ್ರೇಲಿಯಾ ತಂಡವು ಮತ್ತೆ ಚಾಂಪಿಯನ್ ಪಟ್ಟವನ್ನು ಪಡೆಯುವ ನಿಟ್ಟಿನಲ್ಲಿ ವೇಗದ ಬೌಲರ್ ಬ್ರೆಟ್ ಲೀ ಮಹತ್ವದ ಪಾತ್ರ ನಿಭಾಯಿಸುವರೆಂದು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ)ದ ರಾಷ್ಟ್ರೀಯ ಆಯ್ಕೆ ಸಮಿತಿ ಸದಸ್ಯ ಗ್ರೇಗ್ ಚಾಪೆಲ್ ಅವರು ಭವಿಷ್ಯ ನುಡಿದಿದ್ದಾರೆ.

ಭಾರತ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದಲ್ಲಿ ಫೆಬ್ರುವರಿ 19ರಿಂದ ನಡೆಯಲಿರುವ ವಿಶ್ವಕಪ್‌ನಲ್ಲಿ ಲೀ ತಮ್ಮ ಪ್ರಭಾವಿ ಬೌಲಿಂಗ್‌ನಿಂದ ತಂಡಕ್ಕೆ ಬಲವಾಗಿ ನಿಲ್ಲುವರು ಎಂದಿರುವ ಚಾಪೆಲ್ ‘ದೊಡ್ಡದೊಂದು ಕೊರತೆಯ ಕಂದಕವನ್ನು ಮುಚ್ಚುವ ಶಕ್ತಿ ಅವರಿಗಿದೆ’ ಎಂದಿದ್ದಾರೆ. ‘ಲೀ ಸ್ಥಾನದಲ್ಲಿ ಬೇರೆ ಯಾರನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.