
ಅಡಿಲೇಡ್ (ಪಿಟಿಐ): ಮೊನಚಿನ ಬೌಲಿಂಗ್ ನಡೆಸಿದ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಟ್ವೆಂಟಿ–20 ಸರಣಿಯ ಮೊದಲ ಪಂದ್ಯದಲ್ಲಿ 37 ರನ್‌ಗಳ ಜಯ ಗಳಿಸಿತು.
ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ಭಾರತ ನಿಗದಿತ ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 188 ರನ್‌ಗಳಿಸಿತು.
189 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಆತಿಥೇಯ ತಂಡ 19.3 ಓವರ್‌ಗಳಲ್ಲಿ ಸರ್ವಪತನ ಕಂಡು 151 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಸಾಂಘಿಕ ಪ್ರದರ್ಶನ ತೋರಿದ ಭಾರತದ ಬೌಲರ್‌ಗಳು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಜಸ್‌ಪ್ರೀತ್ ಬೂಮ್ರಾ ಅವರು ಮೂರು ವಿಕೆಟ್ ಪಡೆದು ಮಿಂಚಿದರು. ಆರ್. ಅಶ್ವಿನ್, ರವೀಂದ್ರ ಜಡೇಜ್, ಹಾರ್ದಿಕ್ ಪಾಂಡ್ಯೆ ಅವರು ತಲಾ ಎರಡು ವಿಕೆಟ್ ಕಬಳಿಸಿದರು. ಅನುಭವಿ ಆಶೀಶ್ ನೆಹ್ರಾ ಅವರು ಒಂದು ವಿಕೆಟ್ ಉರುಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.