ಜಕಾರ್ತ (ಐಎಎನ್‌ಎಸ್): ಸೈನಾ ನೆಹ್ವಾಲ್ ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನ ಸೆಮಿ ಫೈನಲ್ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಇಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರ್ತಿ ಜೂಲಿಯಾನೆ ಶೆಂಕ್ ವಿರುದ್ಧ ಪರಾಭವಗೊಂಡರು.
51 ನಿಮಿಷಗಳ ಈ ಪಂದ್ಯದಲ್ಲಿ ಜೂಲಿಯನೆ ಶೆಂಕ್ ಎದುರು 21-12, 13-21 ಮ್ತು 14-21ರಲ್ಲಿ ಸೈನಾ ಸೋಲು ಕಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.