ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ಆಶ್ರಯದಲ್ಲಿ ರಾಜ್ಯ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ (18 ವರ್ಷ ವಯಸ್ಸಿನೊಳಗಿನವರ ಬಾಲಕ ಮತ್ತು ಬಾಲಕಿಯರಿಗೆ) ಇಂದು ಚಾಲನೆ ಲಭಿಸಲಿದ್ದು, ಮೇ 3ರ ವರೆಗೆ ನಡೆಯಲಿದೆ.
ಚಾಂಪಿಯನ್‌ಷಿಪ್‌ನ ಪಂದ್ಯಗಳು ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್‌ಬಾಲ್ ಕೋರ್ಟ್‌ನಲ್ಲಿ ನಡೆಯಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಬಾಲಕರ ವಿಭಾಗದಲ್ಲಿ 41 ಹಾಗೂ ಬಾಲಕಿಯರ ವಿಭಾಗದಲ್ಲಿ 27 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.
`ನಾಕೌಟ್ ಕಮ್ ಸೆಮಿಫೈನಲ್ ಲೀಗ್~ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಬೆಳಿಗ್ಗೆ (7.30ಕ್ಕೆ ಆರಂಭ) ಹಾಗೂ ಸಂಜೆಯ (4.30ಕ್ಕೆ ಆರಂಭ) ಅವಧಿಯಲ್ಲಿ ಪಂದ್ಯಗಳನ್ನು ಏರ್ಪಡಿಸಲಾಗಿದೆ. ಕಳೆದ ವರ್ಷ ಬೀಗಲ್ಸ್ ಮತ್ತು ಸ್ಪೋರ್ಟ್ಸ್ ಹಾಸ್ಟೆಲ್ ಮೈಸೂರು ಕ್ರಮವಾಗಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.