ADVERTISEMENT

ಉತ್ತಮ ಬೌಲಿಂಗ್‌ನಿಂದ ಗೆಲುವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2012, 19:30 IST
Last Updated 19 ಏಪ್ರಿಲ್ 2012, 19:30 IST

ಮೊಹಾಲಿ (ಐಎಎನ್‌ಎಸ್): ಎಲ್ಲ ಬೌಲರ್‌ಗಳು ತೋರಿದ ಉತ್ತಮ ಪ್ರದರ್ಶನದಿಂದಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಗೆಲುವು ದೊರೆತಿದೆ ಎಂದು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಹೇಳಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ನೈಟ್ ರೈಡರ್ಸ್ ಎಂಟು ವಿಕೆಟ್‌ಗಳ ಗೆಲುವು ಪಡೆದಿತ್ತು. ಮೊದಲು ಬ್ಯಾಟ್ ಮಾಡಿದ ಕಿಂಗ್ಸ್ ಇಲೆವೆನ್ 124 ರನ್ ಗಳಿಸಿದ್ದರೆ, ಗಂಭೀರ್ ಬಳಗ 16.3 ಓವರ್‌ಗಳಲ್ಲಿ ಎರಡು ವಿಕೆಟ್‌ಗೆ 127 ರನ್ ಗಳಿಸಿ ಜಯ ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.