ADVERTISEMENT

ಎಎಸ್‌ಸಿ- ಪೋಸ್ಟಲ್ ಪಂದ್ಯ ಡ್ರಾ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2012, 21:01 IST
Last Updated 10 ಡಿಸೆಂಬರ್ 2012, 21:01 IST

ಬೆಂಗಳೂರು: ಎಎಸ್‌ಸಿ ಮತ್ತು ಪೋಸ್ಟಲ್ ತಂಡಗಳ ನಡುವಿನ ಬಿಡಿಎಫ್‌ಎ ರಾಜ್ಯ ಸೂಪರ್ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯ ಗೋಲುರಹಿತ ಡ್ರಾದಲ್ಲಿ ಕೊನೆಗೊಂಡಿತು.

ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಎರಡೂ ತಂಡಗಳು ಗೋಲು ಗಳಿಸುವ ಹಲವು ಅವಕಾಶಗಳನ್ನು ಕಳೆದುಕೊಂಡು ನಿರಾಸೆ ಅನುಭವಿಸಿದವು. ಇದೀಗ ಎಎಸ್‌ಸಿ ಮೂರು ಪಂದ್ಯಗಳಿಂದ ನಾಲ್ಕು ಪಾಯಿಂಟ್ ಹೊಂದಿದೆ.

ಸೋಮವಾರ ನಡೆದ `ಎ' ಡಿವಿಷನ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಚಾಂದ್ ಪಾಶಾ (58 ಮತ್ತು 78ನೇ ನಿ.) ತಂದಿತ್ತ ಗೋಲುಗಳ ನೆರವಿನಿಂದ ಸಿಐಎಲ್ 2-0 ರಲ್ಲಿ ಇಸ್ರೋ ವಿರುದ್ಧ ಜಯ ಸಾಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.