ADVERTISEMENT

ಎಐಟಿಎ ಕ್ರಮಕ್ಕೆ ಗೋಸ್ವಾಮಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 23 ಜೂನ್ 2012, 19:30 IST
Last Updated 23 ಜೂನ್ 2012, 19:30 IST

ನವದೆಹಲಿ (ಪಿಟಿಐ): ಲಂಡನ್ ಒಲಿಂಪಿಕ್ಸ್‌ಗೆ ಟೆನಿಸ್ ತಂಡ ಆಯ್ಕೆ ಸಂಬಂಧ ಮಹೇಶ್ ಭೂಪತಿ ಹಾಗೂ ರೋಹನ್ ಬೋಪಣ್ಣ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾದ ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ವಿರುದ್ಧ ಭಾರತ ಫುಟ್‌ಬಾಲ್ ರಂಗದ ಮಾಜಿ ಪ್ರಖ್ಯಾತ ಆಟಗಾರ ಚುನಿ ಗೋಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

`ದೇಶವನ್ನು ಮನದಲ್ಲಿಟ್ಟುಕೊಂಡು ಒಲಿಂಪಿಕ್ಸ್‌ನಲ್ಲಿ ಹೆಮ್ಮೆಯಿಂದ ಆಡಿಬರಬೇಕು. ಆದರೆ ಇವರು ವಿವಾದಕ್ಕೆ ಕಾರಣವಾಗಿದ್ದಾರೆ. ಇದಕ್ಕೆ ಎಐಟಿಎಯನ್ನು ಕೂಡ ದೂರಬೇಕು. ತಂಡದ ಆಯ್ಕೆ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಮೊದಲಿನ ನಿರ್ಧಾರದಿಂದ ಹಿಂದೆ ಸರಿಯಬಾರದಿತ್ತು~ ಎಂದು ಅವರು ಹೇಳಿದ್ದಾರೆ.

`ಆಯ್ಕೆ ಸಮಿತಿಯ ನಿರ್ಧಾರವನ್ನು ಒಪ್ಪದ ಆಟಗಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಏಕೆಂದರೆ ಅವರು ಕೆಟ್ಟ ಸಂಪ್ರದಾಯಕ್ಕೆ ಕಾರಣವಾಗಿದ್ದಾರೆ~ ಎಂದು 1962ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತ ಫುಟ್‌ಬಾಲ್ ತಂಡದ ನಾಯಕ ಗೋಸ್ವಾಮಿ ತಿಳಿಸಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.