ADVERTISEMENT

ಎಐಟಿಎ ಟೆನಿಸ್ ಟೂರ್ನಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2012, 19:30 IST
Last Updated 12 ಫೆಬ್ರುವರಿ 2012, 19:30 IST

ಬೆಂಗಳೂರು: ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯು ಫೆಬ್ರುವರಿ 20ರಿಂದ 26ರ ವರೆಗೆ ಬಾಲಕ ಹಾಗೂ ಬಾಲಕಿಯರಿಗಾಗಿ ಎಐಟಿಎ ಟ್ಯಾಲೆಂಟ್ ಸೀರಿಸ್ ಟೆನಿಸ್ ಚಾಂಪಿಯನ್‌ಷಿಪ್ ಆಯೋಜಿಸಿದೆ.

ಇದರ ಪಂದ್ಯಗಳು ಉದ್ಯಾನನಗರಿಯ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯಲಿವೆ. ಫೆ. 18 ಹಾಗೂ 19ರಂದು ಅರ್ಹತಾ ಸುತ್ತಿನ ಪಂದ್ಯಗಳು ಕೆಎಸ್‌ಎಲ್‌ಟಿಎ ಹಾಗೂ ಕಂಠೀರವ ಕ್ರೀಡಾಂಗಣದ ಕೋರ್ಟ್‌ನಲ್ಲಿ ಜರುಗಲಿವೆ.
ಹೆಚ್ಚಿನ ಮಾಹಿತಿಗೆ ಟೆನಿಸ್ ಸಂಸ್ಥೆಯ ಕಚೇರಿ 080-22869797/1010/3636 ಹಾಗೂ ಮುಖ್ಯ ಕೋಚ್ ನಿರಂಜನ್ ರಮೇಶ್ (9901893601) ಅವರನ್ನು ಸಂಪರ್ಕಿಸಬಹುದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.