ಮುಂಬೈ, (ಐಎಎನ್‌ಎಸ್): ಕೇಂದ್ರದ ಮಾಜಿ ಸಚಿವ ಹಾಗೂ ಕ್ರಿಕೆಟ್ ನಿಯಂತ್ರಣಾ ಮಂಡಳಿಯ ಮಾಜಿ ಅಧ್ಯಕ್ಷ ಎನ್‌ಕೆಪಿ ಸಾಳ್ವೆ (80) ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು 1982-85ರ ಅವಧಿಯಲ್ಲಿ ಕ್ರಿಕೆಟ್ ನಿಯಂತ್ರಣಾ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1998-99ರಲ್ಲಿ ಇವರ ಹೆಸರಿನಲ್ಲಿಯೇ ~ಎನ್‌ಕೆಪಿ ಸಾಳ್ವೆ ಚಾಲೆಂಜರ್ ಟ್ರೋಫಿ ಕ್ರಿಕೆಟ್ ಟೂರ್ನಿ~ಯನ್ನು ಆರಂಭಿಸಲಾಗಿತ್ತು.
ಸಾಳ್ವೆ ಅವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಮೃತರು ಮಗ ಹರೀಶ್ ಮತ್ತು ಮಗಳು ಅರುಂಧತಿ ಅವರನ್ನು ಅಗಲಿದ್ದಾರೆ.
ಮೃತರ ದೇಹವನ್ನು ಭಾನುವಾರ ರಾತ್ರಿ ನವದೆಹಲಿಯಿಂದ ನಾಗಪುರಕ್ಕೆ ತೆಗೆದುಕೊಂಡು ಹೋಗಲಾಗುವುದು. ಸೋಮವಾರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.