ADVERTISEMENT

ಏಷ್ಯಾ ಕಪ್ ಟ್ವೆಂಟಿ–20 ಫೈನಲ್‌: ಬಾಂಗ್ಲಾ ವಿರುದ್ಧ ಸೋತ ಭಾರತ ಮಹಿಳಾ ತಂಡ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 18:41 IST
Last Updated 10 ಜೂನ್ 2018, 18:41 IST

ಕ್ವಾಲಾಲಂಪುರ: ಇಲ್ಲಿನ ಕಿನ್ರಾರಾ ಅಕಾಡೆಮಿ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶ ಮೂರು ವಿಕೆಟ್ ಜಯ ಸಾಧಿಸಿದೆ.

ಭಾರತದ ವಿರುದ್ಧ ಟಾಸ್‌ ಗೆದ್ದ ಬಾಂಗ್ಲಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟಿಂಗ್‌ ಮಾಡಿಡ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 112 ರನ್‌ ಗಳಿಸಿತ್ತು( ಹರ್ಮನ್‌ಪ್ರೀತ್‌ ಕೌರ್‌ 56).

ADVERTISEMENT

113 ರನ್‌ ಗುರಿ ಬೆನ್ನತ್ತಿದ ಬಾಂಗ್ಲಾ ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.