ADVERTISEMENT

ಏಷ್ಯಾ ಕಪ್ ಹಾಕಿ ಟೂರ್ನಿ: ಭಾರತದ ಮೊದಲ ಎದುರಾಳಿ ಲಂಕಾ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): ಹಾಲಿ ಚಾಂಪಿಯನ್ ಭಾರತ ತಂಡ ಮೇ 3ರಿಂದ 13ರವರೆಗೆ ಮಲೇಷ್ಯಾದಲ್ಲಿ ನಡೆಯಲಿರುವ ಪುರುಷರ ಜೂನಿಯರ್ ಏಷ್ಯಾ ಕಪ್ ಹಾಕಿ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

ಈ ತಂಡದವರು `ಬಿ~ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಬದ್ಧ ಎದುರಾಳಿ ಪಾಕಿಸ್ತಾನ, ಲಂಕಾ ಹಾಗೂ ಚೀನಾ ತಂಡಗಳ ಸವಾಲನ್ನು ಎದುರಿಸಬೇಕಾಗಿದೆ. `ಎ~ ಗುಂಪಿನಲ್ಲಿ ಕೊರಿಯಾ, ಆತಿಥೇಯ ಮಲೇಷ್ಯಾ, ಜಪಾನ್ ಹಾಗೂ ಇರಾನ್ ತಂಡಗಳಿವೆ.

ಭಾರತ ತಂಡವನ್ನು ಆಕಾಶ್‌ದೀಪ್ ಸಿಂಗ್ ಮುನ್ನಡೆಸಲಿದ್ದಾರೆ. ಭಾರತ ಈ ಹಿಂದೆ ನಡೆದ 2004 (ಕರಾಚಿ) ಹಾಗೂ 2008ರ (ಚೆನ್ನೈ) ಏಷ್ಯಾ ಕಪ್‌ನಲ್ಲಿ ಚಾಂಪಿಯನ್ ಆಗಿತ್ತು. ಈ ಬಾರಿ ಹ್ಯಾಟ್ರಿಕ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.