ADVERTISEMENT

ಐಪಿಎಲ್‌: ಮಾ. 5 ರಂದು ಅಂತಿಮ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2014, 19:30 IST
Last Updated 2 ಮಾರ್ಚ್ 2014, 19:30 IST

ನಾಗಪುರ (ಪಿಟಿಐ): ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) ಏಳನೇ ಆವೃತ್ತಿಯ ಟೂರ್ನಿ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಬಿಸಿಸಿಐ ಮಾರ್ಚ್‌ 5 ರಂದು ಆಂತಿಮ ನಿರ್ಧಾರ ಕೈಗೊಳ್ಳಲಿದೆ.

‘ಐಪಿಎಲ್‌ ಟೂರ್ನಿ ನಡೆಯುವ ತಾಣದ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ಬಿಸಿಸಿಐ ಅಧ್ಯಕ್ಷರಿಗೆ ಇದೆ. ಮಾ. 5 ರಂದು ಅಂತಿಮ ನಿರ್ಧಾರ ಹೊರಬೀಳಲಿದೆ’ ಎಂದು ಮಂಡಳಿಯ ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಭಾನುವಾರ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಈ ಬಾರಿಯ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ. ಟೂರ್ನಿಯನ್ನು ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಅಥವಾ ಯುಎಇಯಲ್ಲಿ ನಡೆಸುವ ಬಗ್ಗೆ ಮಂಡಳಿ ಈಗಾಗಲೇ ಚಿಂತನೆ ನಡೆಸಿದೆ.

‘ಟೂರ್ನಿಯ ಮೊದಲ ಕೆಲವು ಪಂದ್ಯಗಳನ್ನು ವಿದೇಶದಲ್ಲಿ ನಡೆಸಿ, ಚುನಾವಣೆ ಕೊನೆಗೊಂಡ ಬಳಿಕ ಪಂದ್ಯಗಳನ್ನು ಭಾರತದಲ್ಲಿ ನಡೆಸುವುದು ಮಂಡಳಿಯ ಗುರಿ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.