ADVERTISEMENT

ಐಪಿಎಲ್‌: ಮೂರು ದಿನಗಳಲ್ಲಿ ಅಂತಿಮ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಏಳನೇ ಋತುವಿನ ಟ್ವೆಂಟಿ-20 ಟೂರ್ನಿಯ ತಾಣದ ಬಗ್ಗೆ ಇನ್ನು ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

‘ಭಾರತದಲ್ಲಿ ಎಷ್ಟು ಪಂದ್ಯಗಳನ್ನು ನಡೆಸಲು ಸಾಧ್ಯ ಎಂಬುದನ್ನು ಮೊದಲು ಅರಿಯುವುದು ನಮ್ಮ ಗುರಿ. ಅದಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಮೂರು ದಿನಗಳಲ್ಲಿ ನಮಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.

ಆ ಬಳಿಕ ಐಪಿಎಲ್‌ನ ತಾಣ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದೇವೆ’ ಎಂದು ಐಪಿಎಲ್‌ ಮುಖ್ಯಸ್ಥ ರಂಜಿಬ್‌ ಬಿಸ್ವಾಲ್‌ ಸೋಮವಾರ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ಕಾರಣ ಐಪಿಎಲ್‌ನ ಕೆಲವು ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.