ADVERTISEMENT

ಐಸಿಸಿ ಏಕದಿನ ರ‌್ಯಾಂಕಿಂಗ್ ಕುಸಿದ ಭಾರತ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 20:00 IST
Last Updated 17 ಸೆಪ್ಟೆಂಬರ್ 2011, 20:00 IST

ದುಬೈ (ಪಿಟಿಐ): ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಯಾವುದೇ ಗೆಲುವು ಪಡೆಯಲು ವಿಫಲವಾದ ಕಾರಣ ಭಾರತ ತಂಡ ಐಸಿಸಿ ಏಕದಿನ ರ‌್ಯಾಂಕಿಂಗ್‌ನಲ್ಲಿ ಕುಸಿತ ಅನುಭವಿಸಿದೆ.

ಮಹೇಂದ್ರ ಸಿಂಗ್ ದೋನಿ ಬಳಗ ಇದೀಗ ಐದನೇ ಸ್ಥಾನದಲ್ಲಿದೆ. ಭಾರತ ರ‌್ಯಾಂಕಿಂಗ್ ಪಟ್ಟಿಯಲ್ಲಿ ಇಷ್ಟೊಂದು ಕೆಳಗಿನ ಸ್ಥಾನ ಪಡೆದದ್ದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇದೇ ಮೊದಲು.

`2008ರ ಅಕ್ಟೋಬರ್‌ನಲ್ಲಿ ಭಾರತ ರ‌್ಯಾಂಕಿಂಗ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿತ್ತು. ಆ ಬಳಿಕ ದೋನಿ ಬಳಗ ಇಷ್ಟೊಂದು ಕೆಳಗಿನ ಸ್ಥಾನ ಪಡೆದದ್ದು ಇದೇ ಮೊದಲು. ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ ತಂಡ ಇಂಗ್ಲೆಂಡ್ ಎದುರು 0-4 ರಲ್ಲಿ ಸೋಲು ಅನುಭವಿಸಿದ್ದ ಕಾರಣ ಮೂರನೇ ಸ್ಥಾನಕ್ಕೆ ಕುಸಿತ ಕಂಡಿತ್ತು~ ಎಂದು ಐಸಿಸಿಯ ಹೇಳಿಕೆ ತಿಳಿಸಿದೆ.  ಇಂಗ್ಲೆಂಡ್ ವಿರುದ್ಧದ ಸರಣಿಗೆ ಮುನ್ನ ಭಾರತ ಏಕದಿನ ರ‌್ಯಾಂಕಿಂಗ್ ಪಟ್ಟಿಯಲ್ಲಿ  ಮೂರನೇ ಸ್ಥಾನದಲ್ಲಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.