ದುಬೈ (ಪಿಟಿಐ): ಭಾರತದ ಚೇತೇಶ್ವರ ಪೂಜಾರ ಹಾಗೂ ವಿರಾಟ್ ಕೊಹ್ಲಿ ಐಸಿಸಿ ಗುರುವಾರ ಪ್ರಕಟಿಸಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುಸಿತ ಕಂಡಿದ್ದಾರೆ.
ಎಂಟನೇ ಸ್ಥಾನದಲ್ಲಿದ್ದ ಕೊಹ್ಲಿ ಎರಡು ಸ್ಥಾನ ಕೆಳಗಿಳಿದಿದ್ದು ಹತ್ತನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇನ್ನೂ 7ನೇ ಸ್ಥಾನ ಹೊಂದಿದ್ದ ಪೂಜಾರ ಒಂದು ಸ್ಥಾನ ಇಳಿದು ಎಂಟನೇ ಸ್ಥಾನ ಪಡೆದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಭರ್ಜರಿ ಶತಕ ದಾಖಲಿಸಿ ಮಿಂಚಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಒಟ್ಟು 5 ಸ್ಥಾನ ಮೇಲೇರಿದ್ದು, ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿ 5ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.
ದ.ಆಫ್ರಿಕಾದ ಎಬಿ ಡಿವಿಲಿಯರ್ಸ್, ಶ್ರೀಲಂಕಾದ ಕುಮಾರ ಸಂಗಕ್ಕಾರ ಹಾಗೂ ವೆಸ್ಟ್ ಇಂಡೀಸ್‌ನ ಶಿವನಾರಾಯಣ ಚಂದ್ರಪಾಲ್ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿ ಮುಂದುವರಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.