ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರಸ್ಥಾನಕ್ಕೆ ಭಾರತ

​ಪ್ರಜಾವಾಣಿ ವಾರ್ತೆ
Published 16 ಜನವರಿ 2016, 19:40 IST
Last Updated 16 ಜನವರಿ 2016, 19:40 IST
ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ
ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ   

ನವದೆಹಲಿ (ಪಿಟಿಐ): ಐದು ವರ್ಷಗಳ ನಂತರ ಭಾರತದ ಟೆಸ್ಟ್ ಕ್ರಿಕೆಟ್ ತಂಡವು ಐಸಿಸಿ ರ‍್ಯಾಂಕಿಂಗ್‌ನಲ್ಲಿ ಪ್ರಥಮ ಸ್ಥಾನವನ್ನು ಅಲಂಕರಿಸಿದೆ.

ಜೊಹಾನ್ಸ್‌ಬರ್ಗ್‌ನಲ್ಲಿ ಶನಿವಾರ ಇಂಗ್ಲೆಂಡ್ ತಂಡವು 2–0ಯಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮುನ್ನಡೆ ಸಾಧಿಸಿತು. ಇದರಿಂದಾಗಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡವು ಮೂರನೇ ಸ್ಥಾನಕ್ಕೆ  ಕುಸಿಯಿತು.

ಹೋದ ತಿಂಗಳು ಭಾರತದಲ್ಲಿಯೇ ನಡೆದಿದ್ದ ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಬಳಗವು 3–0ಯಿಂದ ಜಯಿಸಿತ್ತು. ಒಟ್ಟು 110 ಅಂಕಗಳನ್ನು ಗಳಿಸಿದ ಭಾರತ ಎರಡನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ಜಿಗಿಯಿತು.

ಆಸ್ಟ್ರೇಲಿಯಾ (109 ಅಂಕ) ದ್ವಿತೀಯ ಸ್ಥಾನ ಪಡೆಯಿತು. 2011ರಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ಸೋಲು ಅನುಭವಿಸಿದ್ದ ಭಾರತವು ಅಗ್ರಸ್ಥಾನ ಕಳೆದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.