ADVERTISEMENT

ಐಸಿಸಿ ರಾಂಕಿಂಗ್: ಅಗ್ರಸ್ಥಾನದಲ್ಲಿ ಮುಂದುವರಿದ ಭಾರತ

​ಪ್ರಜಾವಾಣಿ ವಾರ್ತೆ
Published 12 ಜುಲೈ 2013, 19:59 IST
Last Updated 12 ಜುಲೈ 2013, 19:59 IST

 ದುಬೈ (ಪಿಟಿಐ): ಸತತ ಜಯ ದಾಖಲಿಸುತ್ತಿರುವ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ರಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ತ್ರಿಕೋನ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೆ ಶುಕ್ರವಾರ ಪ್ರಕಟಗೊಂಡಿರುವ ವಿಶ್ವ ರಾಂಕಿಂಗ್‌ನಲ್ಲಿ ವಿಶ್ವ ಚಾಂಪಿಯನ್ನರು 122 ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ಆಸ್ಟೇಲಿಯಾ (114) ಹಾಗೂ ಇಂಗ್ಲೆಂಡ್ (112) ನಂತರದ ಸ್ಥಾನದಲ್ಲಿವೆ. ಮತ್ತೊಂದೆಡೆ ಆಟಗಾರರ ವಿಶ್ವ ರಾಂಕಿಂಗ್‌ನ ಅಗ್ರ ಹತ್ತರಲ್ಲಿ ಭಾರತದ ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ದೋನಿ ಮುಂದುವರಿದಿದ್ದಾರೆ. ಕೊಹ್ಲಿ ಮೂರನೇ ಸ್ಥಾನ ಉಳಿಸಿಕೊಂಡಿದ್ದರೆ, ನಾಯಕ ದೋನಿ ಐದನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ ಕುಮಾರ 20ನೇ ಸ್ಥಾನಕ್ಕೆ ಏರಿದ್ದಾರೆ. ಗುರುವಾರ ಕೊನೆಗೊಂಡ ತ್ರಿಕೋನ ಏಕದಿನ ಸರಣಿಯಲ್ಲಿ 10 ವಿಕೆಟ್ ಪಡೆದು ಭುವನೇಶ್ವರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ರವೀಂದ್ರ ಜಡೇಜ ಬೌಲಿಂಗ್ ಕುಸಿದು ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT