ADVERTISEMENT

ಒಲಿಂಪಿಕ್ಸ್‌ಗೆ ಸಿದ್ಧರಾಗಲು ಸೈನಾಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 4 ಜೂನ್ 2012, 19:30 IST
Last Updated 4 ಜೂನ್ 2012, 19:30 IST

ನವದೆಹಲಿ (ಪಿಟಿಐ): ಒಲಿಂಪಿಕ್ಸ್‌ಗೆ ತಯಾರಿ  ನಡೆಸಲು ಸೈನಾ ನೆಹ್ವಾಲ್ ಅವರಿಗೆ ಮತ್ತೊಂದು ವೇದಿಕೆ ಸಿದ್ಧವಾಗಿದೆ. ಬ್ಯಾಂಕಾಕ್‌ನಲ್ಲಿ ಮಂಗಳವಾರ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಆರಂಭವಾಗಲಿದ್ದು, ತನ್ನ ಪ್ರದರ್ಶನ ಮಟ್ಟವನ್ನು ಪರೀಕ್ಷಿಸಿಕೊಳ್ಳಲು ಈ ಆಟಗಾರ್ತಿಗೆ ಉತ್ತಮ ಅವಕಾಶ ದೊರೆತಂತಾಗಿದೆ.

ಐದನೇ ರ‌್ಯಾಂಕ್ ಹೊಂದಿರುವ ಸೈನಾ ಬುಧವಾರ ನಡೆಯಲಿರುವ ತಮ್ಮ ಮೊದಲ ಪಂದ್ಯದಲ್ಲಿ ಥಾಯ್ಲೆಂಡ್‌ನ ನಿಕಾವನ್ ಜಿಂದಾಪಾನ್ ಅವರನ್ನು ಎದುರಿಸಲಿದ್ದಾರೆ. ಅಗ್ರರ‌್ಯಾಂಕ್‌ನ ನಾಲ್ಕು ಮಂದಿ ಈ ಟೂರ್ನಿಯಲ್ಲಿಆಡುತ್ತಿಲ್ಲ. ಹಾಗಾಗಿ ಪ್ರಶಸ್ತಿ ಜಯಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಸೈನಾ ಅವರಿಗೆ ಇದೊಂದು ಅತ್ಯುತ್ತಮ ಅವಕಾಶ.

ನೆಹ್ವಾಲ್ ಈಗಾಗಲೇ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಅವರಲ್ಲದೇ, ಪಿ.ಕಶ್ಯಪ್, ಜ್ವಾಲಾ ಗುಟ್ಟಾ, ಅಶ್ವಿನಿ ಪೊನ್ನಪ್ಪ ಹಾಗೂ ವಿ.ದಿಜು ಕೂಡ ಅರ್ಹತೆ ಗಿಟ್ಟಿಸಿದ್ದಾರೆ. ಆದರೆ ಇವರು ಈ ಟೂರ್ನಿಯಲ್ಲಿಆಡುತ್ತಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.