ADVERTISEMENT

ಕಪಿಲ್ ದೇವ್‌ಗೆ ಸಿ. ಕೆ. ನಾಯ್ಡು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 11:14 IST
Last Updated 18 ಡಿಸೆಂಬರ್ 2013, 11:14 IST

ನವದೆಹಲಿ(ಪಿಟಿಐ): ಭಾರತಕ್ಕೆ 1983 ರಲ್ಲಿ ಮೊದಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಕಪಿಲ್ ದೇವ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಿ. ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿದೆ. 

ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಪಿಲ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಬಿಸಿಸಿಐ ಬುಧವಾರ ತಿಳಿಸಿದೆ.

ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್, ಸಂಜಯ್ ಪಟೇಲ್, ಮತ್ತು ಅಯಾಜ್ ಮೆಮನ್ ಅವರು ಚೆನ್ನೈನಲ್ಲಿ ಬುಧವಾರ ಸಭೆ ಸೆರಿದ್ದರು. ಈ ವೇಳೆ ಕಪಿಲ್ ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ADVERTISEMENT

ಆಲ್‌ರೌಂಡರ್ ಆಗಿದ್ದ ಕಪಿಲ್ 131 ಟೆಸ್ಟ್ ಪಂದ್ಯಗಳನ್ನು ಆಡಿದ್ದು 434 ವಿಕೆಟ್‌ಗಳನ್ನು ಪಡೆದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ 225 ಪಂದ್ಯಗಳನ್ನು ಆಡಿದ್ದು, 253 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲೂ ಉತ್ತಮ ಪ್ರದರ್ಶನ ತೋರಿ
3,783 ರನ್ ಕಲೆಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.