
ಪ್ರಜಾವಾಣಿ ವಾರ್ತೆ
ಮುಂಬೈ (ಪಿಟಿಐ): ವಿಶ್ವಕಪ್ ಕಬಡ್ಡಿ ಚಾಂಪಿಯನ್ ಆದ ಭಾರತ ತಂಡದ ಆಟಗಾರ್ತಿಯರಾದ ಮಹಾರಾಷ್ಟ್ರದ ಅಭಿಲಾಷಾ ಮಹಾತ್ರೆ, ಸುವರ್ಣಾ ಬರ್ತಾಕೆ ಹಾಗೂ ದೀಪಿಕಾ ಜೋಸೆಫ್ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ವಿಷಯವನ್ನು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವರ್ ತಿಳಿಸಿದ್ದಾರೆ. ತಂಡದ ಕೋಚ್ ರಮೇಶ್ ಬೆಂಡ್ಗಿರಿ ಅವರಿಗೆ 25 ಲಕ್ಷ ರೂ.ಬಹುಮಾನ ಘೋಷಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.