ಹೈದರಾಬಾದ್ : ಎಲ್ಲರ ನಿರೀಕ್ಷೆಯಂತೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ವಿಜಯಲಕ್ಷ್ಮಿ ಕರ್ನಾಟಕ ತಂಡಕ್ಕೆ ಒಲಿದಿದ್ದಾಳೆ. ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ರಣಜಿ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ದಾಖಲಿಸಿದೆ.
ಪ್ರಸಕ್ತ ಸಾಲಿನ ರಣಜಿ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನದ ಮೂಲಕ ಫೈನಲ್ ಪ್ರವೇಶಿಸಿದ್ದ ಕರ್ನಾಟಕ ತಂಡ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಎನಿಸಿತ್ತು. ಕ್ರೀಡಾಭಿಮಾನಿಗಳ ಅಪಾರ ನಿರೀಕ್ಷೆ ಮತ್ತು ಕ್ರಿಕೆಟ್ ಪಂಡಿತರ ಲೆಕ್ಕಾಚಾರದಂತೆಯೇ ವಿನಯ್ ಕುಮಾರ್ ನಾಯಕತ್ವದ ರಾಜ್ಯ ತಂಡವು ರಣಜಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಎರಡನೇ ಇನ್ನಿಂಗ್ಸಿನಲ್ಲಿ ಮಹಾರಾಷ್ಟ್ರ ತಂಡ ನೀಡಿದ್ದ 156 ರನ್ ಗಳ ಗುರಿಯನ್ನು 40.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪುವ ಮೂಲಕ ಕರ್ನಾಟಕ ತಂಡ ಗೆಲುವಿನ ನಗೆ ಬೀರಿತು.
ಸಂಕ್ಷಿಪ್ತ ಸ್ಕೋರ್ :
ಮಹಾರಾಷ್ಟ್ರ ಮೊದಲ ಇನ್ನಿಂಗ್ಸ್ 305
ಕರ್ನಾಟಕ ಮೊದಲ ಇನ್ನಿಂಗ್ಸ್ 515
ಮಹಾರಾಷ್ಟ್ರ ಎರಡನೇ ಇನ್ನಿಂಗ್ಸ್ 366
ಕರ್ನಾಟಕ ಎರಡನೇ ಇನ್ನಿಂಗ್ಸ್ 157
ಪಂದ್ಯ ಪುರುಷ : ಲೊಕೇಶ್ ರಾಹುಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.