ADVERTISEMENT

ಕಲಿಕೆಯಲ್ಲಿ ಕೊಹ್ಲಿಗೆ ಹೆಚ್ಚು ಆಸಕ್ತಿ

ಪಿಟಿಐ
Published 10 ಮೇ 2018, 19:30 IST
Last Updated 10 ಮೇ 2018, 19:30 IST
ಗ್ಯಾರಿ ಕರ್ಸ್ಟನ್‌ (ಎಡ) ಮತ್ತು ವಿರಾಟ್‌ ಕೊಹ್ಲಿ
ಗ್ಯಾರಿ ಕರ್ಸ್ಟನ್‌ (ಎಡ) ಮತ್ತು ವಿರಾಟ್‌ ಕೊಹ್ಲಿ   

ನವದೆಹಲಿ: ‘ವಿರಾಟ್‌ ಕೊಹ್ಲಿಯವರು ವಿಶ್ವದ ಶ್ರೇಷ್ಠ ಆಟಗಾರ. ಅವರು ಹೊಸ ವಿಷಯಗಳನ್ನು ಕಲಿಯಲು ಹೆಚ್ಚು ಆಸಕ್ತಿ ತೋರುತ್ತಾರೆ. ಕಲಿತಿದ್ದನ್ನು ಬೇಗನೇ ಮೈಗೂಡಿಸಿಕೊಳ್ಳುತ್ತಾರೆ. ಅವರ ಜೊತೆ ಕೆಲಸ ಮಾಡಲು ತುಂಬಾ ಖುಷಿಯಾಗುತ್ತದೆ’ ಎಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಸಹಾಯಕ ಕೋಚ್‌ ಗ್ಯಾರಿ ಕರ್ಸ್ಟನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಹಿರಿಯ ಆಟಗಾರ ಕರ್ಸ್ಟನ್‌, 2008ರಿಂದ 2011ರವರೆಗೆ ಭಾರತ ತಂಡದ ಮುಖ್ಯ ಕೋಚ್‌ ಆಗಿದ್ದರು. ಅವರ ಮಾರ್ಗದರ್ಶನದಲ್ಲಿ ಮಹೇಂದ್ರ ಸಿಂಗ್‌ ದೋನಿ ಪಡೆ ಏಕದಿನ ವಿಶ್ವಕಪ್‌ ಗೆದ್ದಿತ್ತು.

‘ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಕೊಹ್ಲಿ, ಕೌಂಟಿ ಕ್ರಿಕೆಟ್‌ನಲ್ಲಿ ಆಡಲು ನಿರ್ಧರಿಸಿದ್ದಾರೆ. ಇದು ಉತ್ತಮ ನಿರ್ಧಾರ. ಆಟದ ಬಗ್ಗೆ ಅವರು ಹೊಂದಿರುವ ಬದ್ಧತೆಗೆ ಇದು ಸಾಕ್ಷಿ’ ಎಂದಿದ್ದಾರೆ.

ADVERTISEMENT

‘ಭಾರತ ಈಗ ಕ್ರಿಕೆಟ್‌ನ ಶಕ್ತಿ ಕೇಂದ್ರವಾಗಿ ಬೆಳೆದಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಭಾರತದ ಕ್ರಿಕೆಟ್‌ಗೆ ಹೊಸ ಮೆರುಗು ನೀಡಿದೆ. ಯುವ ಆಟಗಾರರಿಗೆ ಸಾಮರ್ಥ್ಯ ಸಾಬೀತುಪಡಿಸಲು ಈ ಲೀಗ್‌ ವೇದಿಕೆಯಾಗಿದೆ’ ಎಂದು ನುಡಿದಿದ್ದಾರೆ.

‘ಭಾರತದಲ್ಲಿ ಪ್ರತಿಭಾನ್ವಿತ ಆಟಗಾರರ ಸಂಖ್ಯೆ ದೊಡ್ಡದಿದೆ. ರಾಷ್ಟ್ರೀಯ ತಂಡದಲ್ಲಿ ಸ್ಥಾನ ಗಳಿಸಲು ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಬೇರುಮಟ್ಟದಿಂದಲೇ ಕ್ರಿಕೆಟ್‌ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.