ADVERTISEMENT

ಕಲ್ಮಾಡಿ ವಿರುದ್ಧ ಯಾವುದೇ ಕ್ರಮವಿಲ್ಲ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2012, 19:30 IST
Last Updated 2 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ಹಲವು ಆರೋಪಗಳಿಗೆ ಗುರಿಯಾಗಿರುವ ಸುರೇಶ್ ಕಲ್ಮಾಡಿ ವಿರುದ್ಧ ಶುಕ್ರವಾರ ಇಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಐಒಎನ ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಹಂಗಾಮಿ ಅಧ್ಯಕ್ಷ ವಿಜಯ್ ಕುಮಾರ್ ಮಲ್ಹೋತ್ರಾ ಅವರಿಗೆ ಕಲ್ಮಾಡಿ ಪತ್ರ ಬರೆದಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ.

`ಕಲ್ಮಾಡಿ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ~ ಎಂದು ಕೇಳಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಐಒಎಗೆ ಮೂರು ಪತ್ರ ಬರೆದಿತ್ತು. ಅಷ್ಟು ಮಾತ್ರವಲ್ಲದೇ, ಈ ಸಂಬಂಧ ಶೀಘ್ರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು. ಕಲ್ಮಾಡಿ ಅಧಿಕೃವಾಗಿ ಐಒಎ ಅಧ್ಯಕ್ಷ ಸ್ಥಾನದಿಂದ ಇನ್ನೂ ಕೆಳಗಿಳಿದಿಲ್ಲ.

`ಕಲ್ಮಾಡಿ ಐಒಎಗೆ ಬರೆದಿರುವ ಎರಡು ಪತ್ರಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲಾ ವ್ಯವಹಾರಗಳಿಂದ ದೂರ ಉಳಿಯುವುದಾಗಿ ಅವರು ತಿಳಿಸಿದ್ದಾರೆ. ನಾವು ಐಒಸಿಗೆ ಪ್ರತಿಕ್ರಿಯೆ ನೀಡಿದ್ದೇವೆ~ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.