ಕೊಲಂಬೊ (ಪಿಟಿಐ): ‘ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡದ ಎದುರು ಗೆಲುವು ಪಡೆಯುವ ಮಹತ್ವದ ಅವಕಾಶ ನಮ್ಮ ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನದಿಂದ ಕೈ ತಪ್ಪಿ ಹೋಯಿತು’ ಎಂದು ಕೆನಡಾ ತಂಡದ ನಾಯಕ ಆಶಿಶ್ ಬಾಗೈ ಟೀಕಿಸಿದ್ದಾರೆ.
‘ಉತ್ತಮ ಫೀಲ್ಡಿಂಗ್ ಹಾಗೂ ಬೌಲಿಂಗ್ ನೆರವಿನಿಂದ ಪಾಕಿಸ್ತಾನ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶ ಕಂಡೆವು. ಆದರೆ ಬ್ಯಾಟಿಂಗ್ ವಿಭಾಗದಲ್ಲಿ ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲರಾದೆವು. ಇದೊಂದು ಭಾರಿ ಬೇಸರ ಮೂಡಿಸಿದ ಸೋಲು’ ಎಂದು ಪಂದ್ಯದ ನಂತರ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.