ADVERTISEMENT

`ಕಾದು ನೋಡಿ'

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 19:51 IST
Last Updated 3 ಜೂನ್ 2013, 19:51 IST

ಮುಂಬೈ/ ಕೋಲ್ಕತ್ತ (ಪಿಟಿಐ): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ (ಬಿಸಿಸಿಐ) ಉದ್ಭವಿಸಿರುವ ಬಿಕ್ಕಟ್ಟಿಗೆ ಸದ್ಯದಲ್ಲಿ ಪರಿಹಾರ ದೊರೆಯುವ ಲಕ್ಷಣಗಳು ಕಾಣುತ್ತಿಲ್ಲ.

`ಸಂಜಯ್ ಜಗದಾಳೆ ರಾಜೀನಾಮೆ ವಾಪಸ್ ಪಡೆಯಲು ನಿರಾಕರಿಸಿದ್ದಾರೆ. ಅಜಯ್ ಶಿರ್ಕೆ ನಿರ್ಧಾರ ಬದಲಿಸುವರೇ ಎಂದು ಮತ್ತೆ 24 ಗಂಟೆ ಕಾಯಲು ಮಂಡಳಿ ತೀರ್ಮಾನಿಸಿದೆ' ಎಂದು ಬಿಸಿಸಿಐ `ಹಂಗಾಮಿ ಅಧ್ಯಕ್ಷ' ಜಗಮೋಹನ್ ದಾಲ್ಮಿಯ ತಿಳಿಸಿದ್ದಾರೆ.

`ಈಗ ತಲೆದೋರಿರುವ ಬಿಕ್ಕಟ್ಟಿಗೆ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ನನಗೆ ಮ್ಯಾಜಿಕ್ ಮಾಡಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

ಮೇಯಪ್ಪನ್, ವಿಂದುಗೆ ನ್ಯಾಯಾಂಗ ಬಂಧನ: ಐಪಿಎಲ್‌ನಲ್ಲಿ ನಡೆದ ಬೆಟ್ಟಿಂಗ್‌ನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಗುರುನಾಥ್ ಮೇಯಪ್ಪನ್ ಮತ್ತು ವಿಂದು ರಾಂಧವ ಅವರಿಗೆ ಜೂನ್ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.

 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.