ADVERTISEMENT

ಕೊಹ್ಲಿ ಮೇಣದ ಪ್ರತಿಮೆ ಅನಾವರಣ

ಪಿಟಿಐ
Published 6 ಜೂನ್ 2018, 18:48 IST
Last Updated 6 ಜೂನ್ 2018, 18:48 IST
ಕೊಹ್ಲಿ ಅವರ ಮೇಣದ ಪ್ರತಿಮೆ
ಕೊಹ್ಲಿ ಅವರ ಮೇಣದ ಪ್ರತಿಮೆ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮೇಣದ ಪ್ರತಿಮೆಯನ್ನು ಇಲ್ಲಿನ ಮೇಡಮ್ ಟುಸಾಡ್ಸ್‌ ವಸ್ತು ಸಂಗ್ರಹಾಲಯದಲ್ಲಿ ಬುಧವಾರ ಅನಾವರಣಗೊಳಿಸಲಾಯಿತು. ಈ ಮೂಲಕ ಅವರು ಲಯೊನೆಲ್‌ ಮೆಸ್ಸಿ, ಕಪಿಲ್ ದೇವ್‌ ಮತ್ತು ಉಸೇನ್ ಬೋಲ್ಟ್ ಅವರ ಸಾಲಿನಲ್ಲಿ ಸೇರ್ಪಡೆಯಾದರು.

ಭಾರತ ಕ್ರಿಕೆಟ್ ತಂಡದ ಜೆರ್ಸಿಯನ್ನು ತೊಟ್ಟಿರುವ ಕೊಹ್ಲಿ ಬ್ಯಾಟಿಂಗ್ ಸಜ್ಜಾಗಿರುವ ಭಂಗಿಯಲ್ಲಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೊಹ್ಲಿ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಪ್ರಶಸ್ತಿ ಗಳಿಸಿಕೊಟ್ಟಿದ್ದರು. ಅರ್ಜುನ ಪ್ರಶಸ್ತಿ, ಐಸಿಸಿ ವರ್ಷದ ಕ್ರಿಕೆಟಿಗ, ಮೂರು ಬಿಸಿಸಿಐ ಅಂತರರಾಷ್ಟ್ರೀಯ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

‘ಇದು ಅತ್ಯಂತ ಗೌರವದ ವಿಷಯ. ಇಲ್ಲಿ ನನ್ನ ಪ್ರತಿಮೆ ಸ್ಥಾಪಿಸಲು ಮುಂದಾದ ವಸ್ತುಸಂಗ್ರಹಾಲಯದ ಅಧಿಕಾರಿಗಳಿಗೆ ನಾನು ಋಣಿಯಾಗಿದ್ದೇನೆ. ಅಭಿಮಾನಿಗಳ ಪ್ರೀತಿಯನ್ನು ನನಗೆ ಮರೆಯಲು ಸಾಧ್ಯವಿಲ್ಲ’ ಎಂದು ಕೊಹ್ಲಿ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.