
ಪ್ರಜಾವಾಣಿ ವಾರ್ತೆಟೌನ್ಸ್ವಿಲೆ, ಆಸ್ಟ್ರೇಲಿಯಾ (ಐಎಎನ್‌ಎಸ್): ಭಾರತ ತಂಡದವರು ಇಲ್ಲಿ ನಡೆಯುತ್ತಿರುವ ಜೂನಿಯರ್ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಗುರುವಾರ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದಾರೆ.
ಈ ಪಂದ್ಯ ಟೋನಿ ಐರ್ಲೆಂಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಕ್ವಾರ್ಟರ್ ಫೈನಲ್‌ನಲ್ಲಿ ಒಂದು ವಿಕೆಟ್‌ನ ರೋಚಕ ಗೆಲುವು ಸಾಧಿಸಿದ್ದ ಭಾರತ ವಿಶ್ವಾಸದಿಂದ ಬೀಗುತ್ತಿದೆ. ನ್ಯೂಜಿಲೆಂಡ್ ಎಂಟರ ಘಟ್ಟದ ಪಂದ್ಯದಲ್ಲಿ ವೆಸ್ಟ್‌ಇಂಡೀಸ್ ತಂಡವನ್ನು ಸೋಲಿಸಿತ್ತು.
ಪಂದ್ಯ ಆರಂಭ: ಭಾರತೀಯ ಕಾಲಮಾನ ಬೆಳಿಗ್ಗೆ ಐದು ಗಂಟೆಗೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.