ನವದೆಹಲಿ (ಪಿಟಿಐ): ವೆಸ್ಟ್‌ಇಂಡೀಸ್‌ನಲ್ಲಿ ನಡೆಯಲಿರುವ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡದಲ್ಲಿ ವೇಗಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಲಾಗಿದೆ. ಈ ಮೊದಲು ಆಯ್ಕೆ ಆಗಿದ್ದ ಎಡಗೈ ವೇಗಿ ಇರ್ಫಾನ್ ಪಠಾಣ್ ಗಾಯಗೊಂಡಿರುವ ಕಾರಣ ಈ ಬದಲಾವಣೆ ಮಾಡಲಾಗಿದೆ.
ಪಠಾಣ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಗೆ ಆಯ್ಕೆ ಮಾಡಲಾಗಿದ್ದ ತಂಡದಲ್ಲೂ ಇದ್ದರು. ಆದರೆ ಹನ್ನೊಂದರ ಬಳಗದಲ್ಲಿ ಆಡಲು ಅವರಿಗೆ ಅವಕಾಶ ಲಭಿಸಿರಲಿಲ್ಲ. ಸ್ನಾಯುಸೆಳೆತಕ್ಕೆ ಒಳಗಾಗಿರುವ ಅವರು ಪುನಃಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಬರಲಿದ್ದಾರೆ.
ಪಶ್ಚಿಮ ಬಂಗಾಳ ತಂಡವನ್ನು ಪ್ರತಿನಿಧಿಸುವ ಶಮಿ ಈಗಾಗಲೇ ಐದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಆ ಪಂದ್ಯಗಳಲ್ಲಿ ಅವರು ಗಮನಾರ್ಹ ಪ್ರದರ್ಶನ ತೋರಿದ್ದರು. ಕೆರಿಬಿಯನ್ ನಾಡಿನಲ್ಲಿ ಜೂನ್ 28ರಂದು ತ್ರಿಕೋನ ಏಕದಿನ ಸರಣಿ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.