ADVERTISEMENT

ಕ್ರಿಕೆಟ್: ಲಂಕಾ ಮೇಲುಗೈ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2012, 19:30 IST
Last Updated 18 ನವೆಂಬರ್ 2012, 19:30 IST

ಗಾಲ್ (ಎಎಫ್‌ಪಿ): ಮಾಹೇಲ ಜಯವರ್ಧನೆ (91) ಮತ್ತು ಏಂಜೆಲೊ ಮ್ಯಾಥ್ಯೂಸ್ (79) ಅವರ ತಾಳ್ಮೆಯ ಆಟದ ನೆರವಿನಿಂದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆ ಪಡೆದಿದೆ.

ಗಾಲ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಭಾನುವಾರ ಲಂಕಾ ತನ್ನ ಮೊದಲ ಇನಿಂಗ್ಸ್‌ನಲ್ಲಿ 247 ರನ್ ಗಳಿಸಿತು. ಪ್ರಥಮ ಇನಿಂಗ್ಸ್‌ನಲ್ಲಿ 221 ರನ್ ಗಳಿಸಿದ್ದ ನ್ಯೂಜಿಲೆಂಡ್ ದಿನದಾಟದ ಅಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 35 ರನ್ ಗಳಿಸಿದೆ.

ಟಿಮ್ ಸೌಥಿ (46ಕ್ಕೆ 4) ಮಾರಕ ಬೌಲಿಂಗ್ ದಾಳಿಗೆ ನಲುಗಿದ್ದ ಲಂಕಾ 50 ರನ್ ಗಳಿಸುವಷ್ಟರಲ್ಲಿ ಐದು ವಿಕೆಟ್ ಕಳೆದುಕೊಂಡಿತ್ತು. ಜಯವರ್ಧನೆ ಮತ್ತು ಮ್ಯಾಥ್ಯೂಸ್ ಆರನೇ ವಿಕೆಟ್‌ಗೆ 156 ರನ್ ಸೇರಿಸಿ ತಂಡಕ್ಕೆ ನೆರವಾದರು.

ಸಂಕ್ಷಿಪ್ತ ಸ್ಕೋರ್: ನ್ಯೂಜಿಲೆಂಡ್: ಮೊದಲ ಇನಿಂಗ್ಸ್ 221 (ಬ್ರೆಂಡನ್ ಮೆಕ್ಲಮ್ 68, ಡೇನಿಯಲ್ ಫ್ಲಿನ್ 53, ರಂಗನಾ ಹೆರಾತ್ 65ಕ್ಕೆ 5) ಮತ್ತು ಎರಡನೇ ಇನಿಂಗ್ಸ್: 10 ಓವರ್‌ಗಳಲ್ಲಿ 1 ವಿಕೆಟ್‌ಗೆ 35; ಶ್ರೀಲಂಕಾ: ಮೊದಲ ಇನಿಂಗ್ಸ್: 80.2 ಓವರ್‌ಗಳಲ್ಲಿ 247 (ಮಾಹೇಲ ಜಯವರ್ಧನೆ 91, ಏಂಜೆಲೊ ಮ್ಯಾಥ್ಯೂಸ್ 79, ಟಿಮ್ ಸೌಥಿ 46ಕ್ಕೆ 4, ಜೀತನ್ ಪಟೇಲ್ 55ಕ್ಕೆ 3)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.