ADVERTISEMENT

ಕ್ಷಮೆಯಾಚಿಸಿದ ಪೀಟರ್ಸನ್

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2012, 19:30 IST
Last Updated 15 ಆಗಸ್ಟ್ 2012, 19:30 IST

ಲಂಡನ್ (ಎಎಫ್‌ಪಿ): ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಕೆಲವು ಆಟಗಾರರಿಗೆ ಎಸ್‌ಎಂಎಸ್ ಕಳುಹಿಸಿ ವಿವಾದಕ್ಕೆ ಕಾರಣವಾಗಿದ್ದ ಕೆವಿನ್ ಪೀಟರ್ಸನ್ ಇದೀಗ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ (ಇಸಿಬಿ) ಕ್ಷಮೆಯಾಚಿಸಿದ್ದಾರೆ.

ಹೆಡಿಂಗ್ಲೆಯಲ್ಲಿ ನಡೆದ ಎರಡನೇ ಕ್ರಿಕೆಟ್ ಟೆಸ್ಟ್ ಸಂದರ್ಭ ಪೀಟರ್ಸನ್ ಎದುರಾಳಿ ದಕ್ಷಿಣ ಅಫ್ರಿಕಾ ತಂಡದ ಕೆಲವು ಆಟಗಾರರಿಗೆ ಎಸ್‌ಎಂಎಸ್ ಕಳುಹಿಸಿದ್ದರು. ಇಂಗ್ಲೆಂಡ್ ನಾಯಕ ಆ್ಯಂಡ್ರ್ಯೂ ಸ್ಟ್ರಾಸ್ ಮತ್ತು ಕೋಚ್ ಆ್ಯಂಡಿ ಫ್ಲವರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಎಸ್‌ಎಂಎಸ್ ಕಳುಹಿಸಿದ್ದರು ಎನ್ನಲಾಗಿದೆ.

ಆದರೆ ಈ ಬಗ್ಗೆ ಪೀಟರ್ಸನ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಎಸ್‌ಎಂಎಸ್ ಕಳುಹಿಸಿದ್ದು ನಿಜವೇ ಅಥವಾ ಅವುಗಳಲ್ಲಿದ್ದ ಮಾಹಿತಿ ಏನು ಎಂಬುದನ್ನು ಬಹಿರಂಗಪಡಿಸಲು ಪೀಟರ್ಸನ್ ವಿಫಲರಾಗಿದ್ದರು.

ಇದರಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ಗೆ ಅವರು ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಇದೀಗ ಪೀಟರ್ಸನ್ ಕ್ಷಮೆಯಾಚಿಸಿದ್ದಾಗಿ ವರದಿಯಾಗಿದೆ. ಆದರೆ ಈ ಬಗ್ಗೆ ಇಸಿಬಿ ಯಾವುದೇ ಹೇಳಿಕೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT