ADVERTISEMENT

ಚಾಂಪಿಯನ್ಸ್‌ ಟ್ರೋಫಿ: ಭಾರತ–ಪಾಕ್ ಪಂದ್ಯಕ್ಕೆ ಮಳೆ ಅಡ್ಡಿ

ಏಜೆನ್ಸೀಸ್
Published 4 ಜೂನ್ 2017, 10:54 IST
Last Updated 4 ಜೂನ್ 2017, 10:54 IST
ಚಾಂಪಿಯನ್ಸ್‌ ಟ್ರೋಫಿ: ಭಾರತ–ಪಾಕ್ ಪಂದ್ಯಕ್ಕೆ ಮಳೆ ಅಡ್ಡಿ
ಚಾಂಪಿಯನ್ಸ್‌ ಟ್ರೋಫಿ: ಭಾರತ–ಪಾಕ್ ಪಂದ್ಯಕ್ಕೆ ಮಳೆ ಅಡ್ಡಿ   

ಲಂಡನ್: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ   ಕ್ರಿಕೆಟ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ತಂಡ ಫೀಲ್ಡಿಂಗ್‌ ಆಯ್ದುಕೊಂಡಿತು.

ಮೊದಲ ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆಯಿತಾದರು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು.  9.5 ಒವರ್‌ನಲ್ಲಿ ಮಳೆ ಆರಂಭವಾಯಿತು. ಎಚ್ಚರಿಕೆಯ ಆಟ ಆಡುತ್ತಿರುವ ಶಿಖರ್‌ ಧವನ್‌ ಮತ್ತು ರೋಹಿತ್‌ ಶರ್ಮಾ ಕ್ರೀಸ್‌ನಲ್ಲಿದ್ದಾರೆ.

ADVERTISEMENT

ಶಿಖರ್‌ ಧವನ್‌ 20, ರೋಹಿತ್‌ ಶರ್ಮಾ 25 ರನ್‌ ಗಳಿಸಿದ್ದಾರೆ. ಭಾರತ ವಿಕೆಟ್‌ ನಷ್ಟವಿಲ್ಲದೆ 9.5 ಒವರ್‌ಗಳಲ್ಲಿ 46 ರನ್‌ಗಳಿಸಿದೆ.

ಮಳೆ: ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಪಂದ್ಯವನ್ನು ನಿಲ್ಲಿಸಲಾಗಿದೆ. ಒಂದು ವೇಳೆ ಮಳೆ ನಿಂತರೆ ಪಂದ್ಯದ ಒವರ್‌ಗಳನ್ನು ಕಡಿತಗೊಳಿಸಿ ಮತ್ತೆ ಪಂದ್ಯವನ್ನು ಆರಂಭಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.