
ಪ್ರಜಾವಾಣಿ ವಾರ್ತೆ
ನವದೆಹಲಿ: ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಚೆಂಡು ವಿರೂಪಗೊಳಿಸಲು ‘ತಂತ್ರ ರೂಪಿಸಿದ’ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ್ ರಾಯಲ್ಸ್ ತಂಡದ ನಾಯಕ ಸ್ಥಾನದಿಂದ ಸ್ಟೀವ್ ಸ್ಮಿತ್ ಅವರನ್ನು ವಜಾ ಮಾಡಲಾಗಿದೆ.
ಈ ಬಗ್ಗೆ ರಾಜಸ್ತಾನ್ ರಾಯಲ್ಸ್ ತಂಡದ ವಕ್ತಾರರು ಮಾಹಿತಿ ನೀಡಿದ್ದಾರೆ. ಸ್ಟೀವ್ ಸ್ಮಿತ್ ಅವರನ್ನು ವಜಾ ಮಾಡಲಾಗಿದ್ದು, 2018ರ 11ನೇ ಐಪಿಎಲ್ ಆವೃತ್ತಿಯಲ್ಲಿ ರಾಜಸ್ತಾನ್ ರಾಯಲ್ಸ್ ತಂಡವನ್ನು ಅಜಿಂಕ್ಯಾ ರಹಾನೆ ಮುನ್ನಡೆಸುವ ಸಾಧ್ಯತೆಗಳಿವೆ.
ಈಗಾಗಲೇ ಸ್ಟೀವ್ ಸ್ಮಿತ್ ಅವರನ್ನು ಆಸ್ಟ್ರೇಲಿಯಾ ತಂಡದ ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದ್ದು ಸ್ಮಿತ್ ಮೇಲೆ ಐಸಿಸಿ ಒಂದು ಪಂದ್ಯದ ನಿಷೇಧ ಹೇರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.