ADVERTISEMENT

ಜುಲೈ 27, 28ರಂದು ಮೈಸೂರಿನಲ್ಲಿ ಅಂತರರಾಷ್ಟ್ರೀಯ ಯೋಗ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 19:59 IST
Last Updated 24 ಜೂನ್ 2013, 19:59 IST

ಮೈಸೂರು: ಬ್ರಹ್ಮಶ್ರೀ ನಾರಾಯಣ ಯೋಗ ಮಂದಿರ ಹಾಗೂ ರಮಣ ಯೋಗ ಶಿಕ್ಷಣ ಕೇಂದ್ರದ 20ನೇ ವಾರ್ಷಿಕೋತ್ಸವದ ಪ್ರಯುಕ್ತ `ಅಂತರರಾಷ್ಟ್ರೀಯ ಯೋಗ ಸ್ಪೋರ್ಟ್ಸ್ ಚಾಂಪಿಯನ್‌ಷಿಪ್ ಹಾಗೂ ಅಂತರ ಶಾಲಾ ಮಟ್ಟದ ಯೋಗಾಸನ ಸ್ಪರ್ಧೆ ಜುಲೈ 27 ಮತ್ತು 28ರಂದು ಕುವೆಂಪುನಗರದ ಚಿಕ್ಕಮ್ಮಾ ನಿಕೇತನ  ಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಬಿ. ಶಾಂತರಾಮ್ ಹೇಳಿದರು.

ಮೈಸೂರು ಯೋಗ ಒಕ್ಕೂಟ ಮತ್ತು ಮಂಗಳೂರಿನ ಮೂಲತ್ವ ಫೌಂಡೇಷನ್ ಚಾರಿಟೆಬಲ್ ಟ್ರಸ್ಟ್‌ನ ಸಹಯೋಗದಲ್ಲಿ  ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಸುಮಾರು 2ಸಾವಿರ ಯೋಗಪಟುಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜುಲೈ 27ರಂದು ಬಾಲಕ-ಬಾಲಕಿಯರಿಗೆ ಸ್ಪರ್ಧೆಯು ನಾಲ್ಕು ವಿಭಾಗದಲ್ಲಿ ಪ್ರತ್ಯೇಕವಾಗಿ ನಡೆಸಲಾಗುವುದು. ಜುಲೈ 28ರಂದು ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಏಳು ವಿಭಾಗದಲ್ಲಿ ಸ್ಪರ್ಧೆ ನಡೆಸಲಾಗುವುದು. ಪ್ರತಿ ವಿಭಾಗದಲ್ಲಿ ಆರು ಮಂದಿಗೆ ಬಹುಮಾನ ನೀಡಲಾಗುತ್ತದೆ ಎಂದರು.

ಮಾಹಿತಿಗೆ ಮೊ. 94496 96998 ಸಂಪರ್ಕಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.