ADVERTISEMENT

ಜೈಲಿನಿಂದ ಪಿಂಕಿ ಪ್ರಾಮಾಣಿಕ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2012, 19:30 IST
Last Updated 11 ಜುಲೈ 2012, 19:30 IST

ಕೋಲ್ಕತ್ತ (ಪಿಟಿಐ): `ಬಂಧನದ ಅವಧಿಯಲ್ಲಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ~ ಎಂದು 26 ದಿನಗಳ ಬಂಧನದ ಬಳಿಕ ಬುಧವಾರ ಜೈಲಿನಿಂದ ಬಿಡುಗಡೆಯಾದ ಅಥ್ಲೀಟ್ ಪಿಂಕಿ ಪ್ರಾಮಾಣಿಕ್ ಆರೋಪಿಸಿದ್ದಾರೆ.

`ಸುಳ್ಳು ಆರೋಪದ ಮೇಲೆ ನನ್ನನ್ನು ಬಂಧಿಸಿದರು. ನನ್ನ ಕೈ, ಕಾಲು ಕಟ್ಟಿಹಾಕಿದರು. ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಿಂಗ ನಿರ್ಣಯ ಪರೀಕ್ಷೆಗೆ ಒಳಪಡಿಸಿದರು. ಕಿರುಚಿಕೊಂಡರೂ ಬಿಡಲಿಲ್ಲ~ ಎಂದು ಅವರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.