ಬರ್ಮಿಂಗ್‌ಹ್ಯಾಮ್ (ಪಿಟಿಐ/ ಐಎಎನ್‌ಎಸ್): ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಇಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಗುರುವಾರ ರಾತ್ರಿ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ಏಳನೇ ಶ್ರೇಯಾಂಕ ಪಡೆದಿರುವ ಸೈನಾ 24–22, 18–21, 21–19ರಲ್ಲಿ ಬೆಯಿವೆನ್ ಜಾಂಗ್ ಅವರನ್ನು ಸೋಲಿಸಿದರು.
ಕಠಿಣ ಪೈಪೋಟಿಯಿಂದ ಕೂಡಿದ್ದ ಪಂದ್ಯದ ಮೊದಲ ಗೇಮ್‌ನಲ್ಲಿ ಅಮೋಘ ಆಟ ಪ್ರದರ್ಶಿಸಿದ ಸೈನಾ ಗೆಲುವು ಪಡೆದರು. ಅಮೆರಿಕವನ್ನು ಪ್ರತಿನಿಧಿಸುತ್ತಿರುವ ಜಾಂಗ್ ಎರಡನೇ ಗೇಮ್‌ನಲ್ಲಿ ಆಕ್ರಮಣಕಾರಿ ಆಟ ತೋರಿದರು. ಅವರು 21–18ರಲ್ಲಿ ಜಯ ಪಡೆದು ಭಾರತದ ಆಟಗಾರ್ತಿ ಗೆ ತಿರುಗೇಟು ನೀಡಿದರಲ್ಲದೇ, ಪಂದ್ಯದಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು.
ಮೂರನೇ ಹಾಗೂ ನಿರ್ಣಾಯಕ ಗೇಮ್ ಅತ್ಯಂತ ರೋಚಕತೆಯಿಂದ ಕೂಡಿತ್ತು. ಗೆಲುವಿಗಾಗಿ ಉಭಯ ಆಟಗಾರ್ತಿಯರು ತೀವ್ರ ಹಣಾಹಣಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.