ADVERTISEMENT

ಟೆಸ್ಟ್ ಕ್ರಿಕೆಟ್ ಪಂದ್ಯ: ಎರಡನೇ ದಿನದಾಟಕ್ಕೆ ಮಳೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 19:30 IST
Last Updated 27 ಜನವರಿ 2012, 19:30 IST

ನೇಪಿಯರ್ (ಎಪಿ): ನ್ಯೂಜಿಲೆಂಡ್ ಮತ್ತು ಜಿಂಬಾಬ್ವೆ ತಂಡಗಳ ನಡುವಿನ ಏಕೈಕ ಕ್ರಿಕೆಟ್ ಟೆಸ್ಟ್ ಪಂದ್ಯದ ಎರಡನೇ ದಿನದಾಟಕ್ಕೆ ಮಳೆ ಅಡ್ಡಿಪಡಿಸಿದೆ.

ಮೆಕ್‌ಲೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಎರಡನೇ ದಿನವಾದ ಶುಕ್ರವಾರ 15.2 ಓವರ್‌ಗಳ ಆಟ ಮಾತ್ರ ನಡೆಯಿತು. ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 105.2 ಓವರ್‌ಗಳಲ್ಲಿ 5 ವಿಕೆಟ್‌ಗೆ 392 ರನ್ ಗಳಿಸಿತ್ತು. ಜಾನ್ ವಾಟ್ಲಿಂಗ್ (52) ಮತ್ತು ಡಗ್ ಬ್ರೇಸ್‌ವೆಲ್ (11) ಕ್ರೀಸ್‌ನಲ್ಲಿದ್ದರು.

ಕಿವೀಸ್ ತಂಡ 5 ವಿಕೆಟ್‌ಗೆ 331 ರನ್‌ಗಳಿಂದ ದಿನದಾಟ ಆರಂಭಿಸಿತ್ತು. 111 ರನ್ ಗಳಿಸಿ ಅಜೇಯರಾಗುಳಿದಿದ್ದ ನಾಯಕ ರಾಸ್‌ಟೇಲರ್ 122 ರನ್ ಗಳಿಸಿದ್ದ ವೇಳೆ ಗಾಯಗೊಂಡು ನಿವೃತ್ತಿಯಾದರು.
ಸಂಕ್ಷಿಪ್ತ ಸ್ಕೋರ್: ನ್ಯೂಜಿಲೆಂಡ್: ಮೊದಲ ಇನಿಂಗ್ಸ್ 105.2 ಓವರ್‌ಗಳಲ್ಲಿ 5 ವಿಕೆಟ್‌ಗೆ 392 (ರಾಸ್ ಟೇಲರ್ 122, ಜಾನ್ ವಾಟ್ಲಿಂಗ್ ಬ್ಯಾಟಿಂಗ್ 52, ಡಗ್ ಬ್ರೇಸ್‌ವೆಲ್ ಬ್ಯಾಟಿಂಗ್ 11).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.