
ದುಬೈ (ಪಿಟಿಐ) : ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಡ್ರಾ ಸಾಧಿಸುವ ಮೂಲಕ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡ ಎರಡನೇ ಸ್ಥಾನಕ್ಕೆ ಮರಳಿದೆ.
ಸತತ ಎರಡು ಟೆಸ್ಟ್ ಸರಣಿ ಸೋಲುವ ಮೂಲಕ ಭಾರತ ತಂಡವು 117 ರ‍್ಯಾಂಕಿಂಗ್ ನಿಂದ 112ಕ್ಕೆ ಕುಸಿದಿದೆ. 111 ಪಾಯಿಂಟ್‌ಗಳೊಂದಿಗೆ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಈಗಾಗಲೇ 1–0 ಯಿಂದ ಮುನ್ನಡೆ ಪಡೆದಿದೆ. ಉಳಿದ ಎರಡು ಪಂದ್ಯದಲ್ಲಿ ಒಂದರಲ್ಲಿ ಡ್ರಾ ಸಾಧಿಸಿದರೂ ಸಹ ಆಸೀಸ್ ತಂಡವು ಮಹಿ ಪಡೆಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿಯಲಿದೆ.
ಇನ್ನೊಂದೆಡೆ ದಕ್ಷಿಣ ಆಫ್ರಿಕಾ ಈಗಾಗಲೇ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ತನ್ನ ಅಗ್ರ ಸ್ಥಾನ ಖಚಿತಪಡಿಸಿಕೊಂಡಿದ್ದು, ಒಂದೊಮ್ಮೆ ಸರಣಿಯ ಉಳಿದೆರಡೂ ಟೆಸ್ಟ್ ಪಂದ್ಯಗಳನ್ನು ಗೆದ್ದು ಕೊಂಡಲ್ಲಿ ಆಸ್ಟ್ರೇಲಿಯಾ ತಂಡ 110 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.