ನವದೆಹಲಿ (ಪಿಟಿಐ): ಕರ್ನಾಟಕದ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟ್ವೆಂಟಿ-20 ಕ್ರಿಕೆಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಪಂದ್ಯ ಮಾರ್ಚ್ 30 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಎಲ್ಲ ಆಟಗಾರರು ತಂಡದಲ್ಲಿದ್ದಾರೆ.
ತಂಡ ಇಂತಿದೆ: ಮಹೇಂದ್ರ ಸಿಂಗ್ ದೋನಿ (ನಾಯಕ), ವಿರಾಟ್ ಕೊಹ್ಲಿ (ಉಪನಾಯಕ), ರಾಬಿನ್ ಉತ್ತಪ್ಪ, ಗೌತಮ್ ಗಂಭೀರ್, ರೋಹಿತ್ ಶರ್ಮ, ಸುರೇಶ್ ರೈನಾ, ರವೀಂದ್ರ ಜಡೇಜ, ಆರ್. ಅಶ್ವಿನ್, ಪ್ರವೀಣ್ ಕುಮಾರ್, ವಿನಯ್ ಕುಮಾರ್, ರಾಹುಲ್ ಶರ್ಮ, ಯೂಸುಫ್ ಪಠಾಣ್, ಮನೋಜ್ ತಿವಾರಿ, ಇರ್ಫಾನ್ ಪಠಾಣ್, ಅಶೋಕ್ ದಿಂಡಾ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.