ADVERTISEMENT

ತನಿಖೆಗೆ ಹಾಜರಾದ ಶ್ರೀನಿವಾಸನ್

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 19:30 IST
Last Updated 19 ಡಿಸೆಂಬರ್ 2013, 19:30 IST

ಚೆನ್ನೈ (ಪಿಟಿಐ): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಎನ್.ಶ್ರೀನಿವಾಸನ್ ಮತ್ತು ಅವರ ಅಳಿಯ ಗುರುನಾಥ್ ಮೇಯಪ್ಪನ್ ಐಪಿಎಲ್‌ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ  ನಿವೃತ್ತ ಮುಖ್ಯ ನ್ಯಾಯಮೂರ್ತಿ ಮುಕುಲ್ ಮುದ್ಗಲ್ ಸಮಿತಿ ಮುಂದೆ ಹಾಜರಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರಾಗಿರುವ ಶ್ರೀನಿವಾಸನ್ ಹಾಗೂ ತಂಡದ ಮಾಜಿ ಮುಖ್ಯಾಧಿ ಕಾರಿ ಮೇಯಪ್ಪನ್ ಅವರನ್ನು ಸಮಿತಿ ಫಿಕ್ಸಿಂಗ್ ಸಂಬಂಧ ವಿಚಾರಣೆ ನಡೆಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಐಪಿಎಲ್ ಆರನೇ ಆವೃತ್ತಿ ವೇಳೆ ಸ್ಪಾಟ್‌ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಮೇಯಪ್ಪನ್‌ ಅವರನ್ನು ಮುಂಬೈ ಪೊಲೀಸರು ಬಂಧಿಸಿ ಬಾಂಬೆ ಹೈಕೋರ್ಟ್‌ಗೆ ಹಾಜರುಪಡಿಸಿದ್ದರು. ನಂತರ ಅವರು ಜಾಮೀನು ಪಡೆದು ಹೊರಬಂದಿದ್ದರು.

ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ರಾಜಸ್ತಾನ ರಾಯಲ್ಸ್‌ ತಂಡದ ಮೂವರು ಆಟಗಾರರು ಭಾಗಿಯಾಗಿದ್ದರು. ಈ ಘಟನೆ ನಡೆದಾಗ ಶ್ರೀನಿವಾಸನ್‌ ಬಿಸಿಸಿಐ ಅಧ್ಯಕ್ಷ ಗಾದಿಯಿಂದ ಕೆಳಗಿಳಿಯುವಂತೆ ಒತ್ತಡ ಹೆಚ್ಚಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.