ADVERTISEMENT

ತರಬೇತಿಗೆ ರೂ.13.91 ಕೋಟಿ ಬಿಡುಗಡೆ: ಮಾಕನ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2011, 19:30 IST
Last Updated 6 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ದೇಶದ ಕ್ರೀಡಾಪಟುಗಳಿಗೆ ತರಬೇತಿ ಉದ್ದೇಶಕ್ಕಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರೂ. 13.91 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ಮಂಗಳವಾರ ಲೋಕ ಸಭೆಯಲ್ಲಿ ತಿಳಿಸಿದರು.

ಟೆನಿಸ್ ತಾರೆಗಳಾದ ಲಿಯಾಂಡರ್ ಪೇಸ್, ಭೂಪತಿ, ಸೋಮದೇವ್, ರೋಹನ್ ಬೋಪಣ್ಣ ಹಾಗೂ ಸಾನಿಯಾ ಸೇರಿದಂತೆ ಅನೇಕ ಕ್ರೀಡಾಪಟುಗಳು ಆರ್ಥಿಕ ನೆರವು ಪಡೆದುಕೊಂಡಿದ್ದಾರೆಂದು ಅವರು ಹೇಳಿದರು.

ಪ್ರಭಾವಿ ಶೂಟರ್‌ಗಳು, ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಮಾತ್ರವಲ್ಲ ಜಿಮ್ನಾಸ್ಟಿಕ್ಸ್ ಸ್ಪರ್ಧಿಗಳಿಗೂ ಸರ್ಕಾರವು ಉನ್ನತ ಮಟ್ಟದ ತರಬೇತಿ ಸಿಗುವಂತೆ ವ್ಯವಸ್ಥೆ ಮಾಡಿದೆ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.