ನವದೆಹಲಿ (ಪಿಟಿಐ): ಸೋಲು, ನಿರಾಸೆಯನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನುಭವಿಸಿದ ಭಾರತ ಕ್ರಿಕೆಟ್ ತಂಡದವರು ತವರಿಗೆ ವಾಪಸ್ಸಾದರು.
ನಾಯಕ ಮಹೇಂದ್ರ ಸಿಂಗ್ ದೋನಿ, ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಸುರೇಶ್ ರೈನಾ, ಪ್ರವೀಣ್ ಕುಮಾರ್ ಹಾಗೂ ರಾಹುಲ್ ಶರ್ಮ ಅವರು ಸಿಂಗಪುರದ ಮಾರ್ಗವಾಗಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಮರಳಿದರು.
ಸಚಿನ್ ತೆಂಡೂಲ್ಕರ್, ಜಹೀರ್ ಖಾನ್ ಹಾಗೂ ವೇಗಿಉಮೇಶ್ ಯಾದವ್ ಮುಂಬೈಗೆ ತೆರಳಿದರೆ, ಆರ್. ಅಶ್ವಿನ್ ಶನಿವಾರವೇ ಚೆನ್ನೈಗೆ ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.