ADVERTISEMENT

ತುಮಕೂರಿನಲ್ಲಿ ಇಂದಿನಿಂದ ರಾಷ್ಟ್ರೀಯ ಕೊಕ್ಕೊ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 19:30 IST
Last Updated 4 ಡಿಸೆಂಬರ್ 2013, 19:30 IST

ತುಮಕೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಡಿ. 5ರಿಂದ 8ರ ವರೆಗೆ 25ನೇ ರಾಷ್ಟ್ರೀಯ ಸಬ್‌ ಜೂನಿಯರ್‌ ಬಾಲಕ– ಬಾಲಕಿಯರ ಹಾಗೂ 24ನೇ ಪುರುಷ– ಮಹಿಳೆಯರ ಫೆಡರೇಷನ್‌ ಕಪ್‌ ಕೊಕ್ಕೊ ಟೂರ್ನಿ ನಡೆಯಲಿದೆ.

ಈ ಟೂರ್ನಿಯಲ್ಲಿ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 72 ತಂಡಗಳ ಒಂದು ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಬಂದಿದ್ದಾರೆ. ಡಿ. 5ರಂದು ಸಂಜೆ ಉದ್ಘಾಟನೆ  ನಡೆಯಲಿದ್ದು, 6ರಂದು ಪ್ರಿಕ್ವಾರ್ಟರ್‌ ಫೈನಲ್‌ ಪಂದ್ಯಗಳು ನಡೆಯಲಿವೆ. 8ರಂದು ಫೈನಲ್‌ ಪಂದ್ಯ     ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.