ADVERTISEMENT

ಥ್ರೋಬಾಲ್: ಕರ್ನಾಟಕ ತಂಡಗಳ ಶುಭಾರಂಭ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 19:59 IST
Last Updated 21 ಡಿಸೆಂಬರ್ 2012, 19:59 IST

ನಂಜನಗೂಡು: ಆತಿಥೇಯ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡಗಳು ಶುಕ್ರವಾರ ಆರಂಭವಾದ 21ನೇ ರಾಷ್ಟ್ರೀಯ ಸಬ್ ಜೂನಿಯರ್ ಥ್ರೋಬಾಲ್ ಚಾಂಪಿಯನ್‌ಷಿಪ್ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿ ಶುಭಾರಂಭ ಮಾಡಿದರು.

ಪಟ್ಟಣದ ಸಿಟಿಜನ್ ಶಾಲೆ ಮೈದಾನದಲ್ಲಿ ನಡೆದ ಪಂದ್ಯಗಳಲ್ಲಿ ಕರ್ನಾಟಕದ ಬಾಲಕರ ತಂಡ 25-09, 25-12ರಲ್ಲಿ ರಾಜಸ್ತಾನವನ್ನು ಮಣಿಸಿದರೆ, ಬಾಲಕಿಯರು 25-13, 25-11ರಲ್ಲಿ ಬಿಹಾರ್ ಎದುರು ಗೆಲುವು ಸಾಧಿಸಿದರು.

ಮೂರು ದಿನಗಳ ಕಾಲ ನಡೆಯುವ ಈ ಚಾಂಪಿಯನ್‌ಷಿಪ್‌ನಲ್ಲಿ ಬಾಲಕ- ಬಾಲಕಿಯರ ವಿಭಾಗದಲ್ಲಿ ಕ್ರಮವಾಗಿ 14 ಮತ್ತು 11 ತಂಡಗಳು ವಿವಿಧ ರಾಜ್ಯಗಳಿಂದ ಬಂದಿವೆ. ಲೀಗ್ ಮತ್ತು ನಾಕೌಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಕರ್ನಾಟಕ ಅಮೆಚೂರ್ ಥ್ರೋಬಾಲ್ ಸಂಸ್ಥೆ, ಮೈಸೂರು ಜಿಲ್ಲಾ ಥ್ರೋಬಾಲ್ ಸಂಸ್ಥೆ ಮತ್ತು ನಂಜನಗೂಡಿನ ಸಿಟಿಜನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ಗಳ ಸಂಯುಕ್ತ ಆಶ್ರಯದಲ್ಲಿ ಈ ಚಾಂಪಿಯನ್‌ಷಿಪ್‌ೆ ಆಯೋಜನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.