ADVERTISEMENT

ದಕ್ಷಿಣ ಆಫ್ರಿಕಾ ಎದುರು ಪಾಕಿಸ್ತಾನಕ್ಕೆ ಗೆಲುವು

ಏಜೆನ್ಸೀಸ್
Published 8 ಜೂನ್ 2017, 19:30 IST
Last Updated 8 ಜೂನ್ 2017, 19:30 IST
ಬಾಬರ್ ಅಜಮ್ (ಎಡ) ಮತ್ತು ಮೊಹಮ್ಮದ್ ಹಫೀಜ್
ಬಾಬರ್ ಅಜಮ್ (ಎಡ) ಮತ್ತು ಮೊಹಮ್ಮದ್ ಹಫೀಜ್   

ಬರ್ಮಿಂಗ್‌ಹ್ಯಾಮ್‌: ಪಾಕಿಸ್ತಾನ ತಂಡದವರು ದಕ್ಷಿಣ ಆಫ್ರಿಕಾ ವಿರುದ್ಧದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ‘ಬಿ’ ಗುಂಪಿನ ಪಂದ್ಯ ದಲ್ಲಿ ಡಕ್ವರ್ಥ್‌ ಲೂಯಿಸ್‌ ನಿಯಮದ ಅನುಸಾರ 19ರನ್‌ಗಳಿಂದ ಗೆದ್ದಿದ್ದಾರೆ. ಈ ಮೂಲಕ ಸೆಮಿಫೈನಲ್‌ ಪ್ರವೇಶಿಸುವ ಆಸೆಯನ್ನು ಜೀವಂತ ವಾಗಿಟ್ಟುಕೊಂಡಿದ್ದಾರೆ.

ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಸೋತು ಸಾಕಷ್ಟು ಟೀಕೆ ಎದುರಿಸಿದ್ದ ಸರ್ಫರಾಜ್‌ ಅಹ್ಮದ್‌ ಪಡೆ ಎಜ್‌ಬಾಸ್ಟನ್‌ ಅಂಗಳದಲ್ಲಿ ಮಿಂಚಿನ ಆಟ ಆಡಿ ಗಮನ ಸೆಳೆಯಿತು.

ದಕ್ಷಿಣ ಆಫ್ರಿಕಾ ನೀಡಿದ್ದ 219ರನ್‌ಗಳ ಗುರಿ ಬೆನ್ನಟ್ಟಿದ್ದ ಪಾಕ್‌ 27 ಓವರ್‌ಗಳಲ್ಲಿ 3 ವಿಕೆಟ್‌ಗೆ 119ರನ್‌ ಗಳಿಸಿದ್ದ ವೇಳೆ ಧಾರಾಕಾರ ಮಳೆ ಸುರಿಯಿತು.

ADVERTISEMENT

ಆ ನಂತರ ಸಾಕಷ್ಟು ಸಮಯ ಕಾದರೂ ಮಳೆ ನಿಲ್ಲಲಿಲ್ಲ. ಹೀಗಾಗಿ ಡಕ್ವರ್ಥ್‌ ಲೂಯಿಸ್‌ ನಿಯಮದ ಅನ್ವಯ  ಪಾಕಿಸ್ತಾನವನ್ನು ವಿಜಯೀ ಎಂದು ಘೋಷಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.