ADVERTISEMENT

ದುಲೀಪ್ ಟ್ರೋಫಿ: ಕೇರಳದಲ್ಲಿ ಫೈನಲ್ ಪಂದ್ಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2013, 19:59 IST
Last Updated 13 ಜುಲೈ 2013, 19:59 IST

ಕೊಚ್ಚಿ (ಪಿಟಿಐ): ಅಖಿಲ ಭಾರತ ದುಲೀಪ್ ಟ್ರೋಫಿಯ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸುವ ಅವಕಾಶ ಮೊದಲ ಬಾರಿಗೆ ಕೇರಳಕ್ಕೆ ಲಭಿಸಿದೆ. ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಅಕ್ಟೋಬರ್ 17 ರಿಂದ 21ರ ವರೆಗೆ ಫೈನಲ್ ಪಂದ್ಯ ನಡೆಯಲಿದೆ.

ಚೆನ್ನೈನಲ್ಲಿ ನಡೆದ ದಕ್ಷಿಣ ವಲಯ ಪಂದ್ಯ ನಿಗದಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಪ್ರಕಟಣೆಯಲ್ಲಿ ಶನಿವಾರ ತಿಳಿಸಿದೆ. ಅಕ್ಟೋಬರ್ 10 ರಿಂದ 13ರ ವರೆಗೆ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.