ADVERTISEMENT

ನವೆಂಬರ್‌ನಲ್ಲಿ ಭಾರತ– ಶ್ರೀಲಂಕಾ ಸರಣಿ

ಏಜೆನ್ಸೀಸ್
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ಮುಂಬೈ (ರಾಯಿಟರ್ಸ್‌): ಶ್ರೀಲಂಕಾ ತಂಡದವರು ತಲಾ ಮೂರು ಪಂದ್ಯಗಳ ಟೆಸ್ಟ್‌, ಏಕದಿನ ಮತ್ತು ಟಿ–20 ಸರಣಿಗಳನ್ನು ಆಡುವ ಸಲುವಾಗಿ ನವೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಸರಣಿಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಟೆಸ್ಟ್‌ ಸರಣಿಯ ಮೊದಲ ಪಂದ್ಯ ನವೆಂಬರ್‌ 16ರಿಂದ 20 ವರೆಗೆ ಕೋಲ್ಕತ್ತದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

ನಾಗಪುರ ಮತ್ತು ದೆಹಲಿಯಲ್ಲಿ ಎರಡು ಮತ್ತು ಮೂರನೇ ಪಂದ್ಯಗಳು ಆಯೋಜನೆಯಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.