ಕೊಲಂಬೊ (ಪಿಟಿಐ): ತಿಲಕರತ್ನೆ ದಿಲ್ಶಾನ್ ಅವರು ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸಿದ್ದಾರೆ. ಲಂಕಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಭಾನುವಾರ ಕೊನೆಗೊಂಡಿತ್ತು. ಅದರ ಬೆನ್ನಲ್ಲೇ ದಿಲ್ಶಾನ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ಈ ವಿಷಯವನ್ನು ಲಂಕಾ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ. ಹಿರಿಯ ಬ್ಯಾಟ್ಸ್‌ಮನ್ ಮಾಹೇಲ ಜಯವರ್ಧನೆ ಅವರನ್ನು ಮತ್ತೆ ನಾಯಕನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.